ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
39ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ