ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
5ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.
6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
7ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
9ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ