ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
26ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
27ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
29ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
30ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ