ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
3ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
5ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
7ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ