ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
14ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
15ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ