ಯೆಹೋಶುವ 7:4

ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 7

2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ

3ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.

4ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು.

5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.

6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.

ಯೆಹೋಶುವ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी