ಯೆಹೋಶುವ 22:4

ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.

ಸಂದರ್ಭದೊಂದಿಗೆ ಓದಿ · ಯೆಹೋಶುವ 22

2ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.

3ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.

4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.

5ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.

6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.

ಯೆಹೋಶುವ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी