ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
12ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
13ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
14ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
15ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
16ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ