ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
12ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
13ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ