೧ ತಿಮೊಥೆಯನಿಗೆ 2:5

ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 2

3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.

4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.

5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;

6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.

7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)

೧ ತಿಮೊಥೆಯನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी