ಪ್ರಲಾಪಗಳು 2:19

ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 2

17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.

18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.

19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.

20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?

21ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.

ಪ್ರಲಾಪಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी