ಅರಣ್ಯಕಾಂಡ 22:12

ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

10ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--

11ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.

12ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.

13ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,

14ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी