ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
4ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
5ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
6ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
7ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ