ಯೆಶಾಯ 52:3

ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 52

1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.

2ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್‌ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.

3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.

4ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.

5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.

ಯೆಶಾಯ 52 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी