ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
7ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
8ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
11ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ