ಧರ್ಮೋಪದೇಶಕಾಂಡ 26:14

ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 26

12ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.

13ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.

14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.

15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.

16ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.

ಧರ್ಮೋಪದೇಶಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी