ಯೆಶಾಯ 48:1

ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 48

1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.

3ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.

ಯೆಶಾಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी