ಆದಿಕಾಂಡ 22:5

ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 22

3ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.

4ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.

5ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.

6ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.

7ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.

ಆದಿಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी