ಲೂಕನು 5:32

ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 5

30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.

31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.

32ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.

33ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.

34ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?

ಲೂಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी