ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
36ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ