ಆದಿಕಾಂಡ 48:4

ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 48

2ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.

3ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.

4ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.

5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್‌ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್‌ ಸಿಮೆಯೋನ್‌ ಇವ ರಂತೆ ನನ್ನವರಾಗಿರಬೇಕು.

6ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ.

ಆದಿಕಾಂಡ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी