ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
12ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
13ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ