ಯೆಶಾಯ 40:22

ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

ಸಂದರ್ಭದೊಂದಿಗೆ ಓದಿ · ಯೆಶಾಯ 40

20ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.

21ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?

22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

23ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2

24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.

ಯೆಶಾಯ 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी