ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ