೧ ಕೊರಿಂಥದವರಿಗೆ 13:3

ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 13

1ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.

2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.

3ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.

4ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,

5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.

೧ ಕೊರಿಂಥದವರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी