ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
32ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ