ಆದಿಕಾಂಡ 6:18

ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 6

16ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.

17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.

18ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.

19ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.

20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.

ಆದಿಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी