ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
2ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
3ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ