ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
17ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
19ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
20ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
21ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ