ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
18ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
19ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
20ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.
21ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ