ಯೆಹೋಶುವ 20:4

ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು.

ಸಂದರ್ಭದೊಂದಿಗೆ ಓದಿ · ಯೆಹೋಶುವ 20

2ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.

3ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.

4ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು.

5ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.

6ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.

ಯೆಹೋಶುವ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी