ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
1ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ