ಕರ್ತನು ಮೋಶೆಯೊಂದಿಗೆ ಮಾತನಾಡಿ--
10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
11ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
12ಕರ್ತನು ಮೋಶೆಯೊಂದಿಗೆ ಮಾತನಾಡಿ--
13ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
14ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ