ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
11ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ