ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
11ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
12ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
13ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
14ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.
15ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ