ಯೆರೆಮಿಯ 30:20

ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 30

18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.

19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.

20ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.

21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.

22ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.

ಯೆರೆಮಿಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी