೧ ಸಮುವೇಲನು 19:6

ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 19

4ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;

5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.

6ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.

7ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.

8ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.

೧ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी