ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
20ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
21ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
22ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ