ಆದಿಕಾಂಡ 13:10

ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 13

8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.

9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.

10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

11ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.

12ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.

ಆದಿಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी