೨ ಅರಸುಗಳು 18:13

ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 18

11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

12ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.

13ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.

14ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.

15ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.

೨ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी