ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.
23ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
24ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.
25ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.
26ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು.
27ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ