ಆದಿಕಾಂಡ 31:40

ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 31

38ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.

39ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.

40ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.

41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.

42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.

ಆದಿಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी