ಯೋನ 4:7

ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.

ಸಂದರ್ಭದೊಂದಿಗೆ ಓದಿ · ಯೋನ 4

5ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.

6ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.

7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.

8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.

9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.

ಯೋನ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी