ಯೆಶಾಯ 48:17

ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 48

15ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.

16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.

17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.

18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;

19ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು.

ಯೆಶಾಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी