ಮಲಾಕಿಯ 2:6

ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.

ಸಂದರ್ಭದೊಂದಿಗೆ ಓದಿ · ಮಲಾಕಿಯ 2

4ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.

5ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.

6ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.

7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.

8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.

ಮಲಾಕಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी