ಯೆರೆಮಿಯ 2:29

ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

27ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.

28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.

29ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ.

30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

31ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी