ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
44ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ