ಲೂಕನು 7:21

ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.

ಸಂದರ್ಭದೊಂದಿಗೆ ಓದಿ · ಲೂಕನು 7

19ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.

20ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.

21ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.

22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು

23ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.

ಲೂಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी