ಅರಣ್ಯಕಾಂಡ 14:31

ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.

30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.

31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.

32ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.

33ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी