ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
1ಆ ಸಮಯದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
3ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
5ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ